ಬಂಟ್ವಾಳ, ಏ 27 (Daijiworld News/MSP): ಬಂಟ್ವಾಳದ ನರಿಕೊಂಬು ಗ್ರಾಮದ ನಾಯಿಲ ನಿವಾಸಿ , ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಕೊರೊನಾ ದೃಢಪಟ್ಟ ಹಿನ್ನಲೆಯಲ್ಲಿ ಈ ಪ್ರದೇಶವನ್ನು ಸೀಲ್ ಡೌನ್ ಮಾಡಿ ಮನೆಯಿಂದ ಹೊರಬರದಂತೆ ಎಚ್ಚರಿಕೆ ನೀಡಲಾಗಿದೆ. ಪ್ರಸ್ತುತ ಸೋಂಕು ದೃಢಪಟ್ಟಿರುವ ಮಹಿಳೆಯ ಮನೆಯಲ್ಲಿ ಆಕೆಯ ಪತಿ, ಹಾಗೂ ಮೂವರು ಮಕ್ಕಳಿದ್ದು, ಎಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಮನೆಯಿಂದ ಸುಮಾರು500 ಮೀ ವ್ಯಾಪ್ತಿಯನ್ನು ನಿಯಂತ್ರಿತ ವಲಯವಾಗಿ ಘೋಷಿಸಲಾಗಿದ್ದು, ಸುಮಾರು 153 ಕ್ಕೂ ಅಧಿಕ ಮನೆಗಳ 650ಕ್ಕೂ ಅಧಿಕ ಮಂದಿಗೆ ಕ್ವಾರಂಟೈನ್ ಇರುತ್ತದೆ.
ಗ್ರಾ.ಪಂ ನ ಟಾಸ್ಕ್ ಫೋರ್ಸ್ ಸಮಿತಿಯ ವತಿಯಿಂದ ಅಗತ್ಯ ವಸ್ತುಗಳ ಪೂರೈಕೆಯಾಗಲಿದೆ. ನರಿಕೊಂಬಿನ ಸತ್ಯಶ್ರೀ ಕಲ್ಯಾಣ ಮಂಟಪದ ಮೂಲಕ ನಾಯಿಲ ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಬಂದ್ ಮಾಡಲಾಗಿದ್ದು ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
ನಾಯಿಲದ ಸುತ್ತಮುತ್ತಲಿನ 7 ಕೀ.ಮೀ ನ್ನು ಬಫರ್ ಝೋನ್ ಎಂದು ಘೋಷಿಸಲಾಗಿದೆ. ಈ ವ್ಯಾಪ್ತಿಯಲ್ಲಿ 15,200 ಮನೆ, ೫೫೯೮ ಅಂಗಡಿ ಮುಂಗಟ್ಟು, 75,600 ಜನಸಂಖ್ಯೆ ಈ ವ್ಯಾಪ್ತಿಗೆ ಒಳಪಟ್ಟಿದ್ದಾರೆ.