ಕುಂದಾಪುರ, ಏ 28 (Daijiworld News/MSP): ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ವಿನ್ನಿಫ್ರೆಡ್ ಫೆರ್ನಾಂಡಿಸ್(91) ಏ. 28 ರ ಮಂಗಳವಾರ ಮಧ್ಯಾಹ್ನ ಕುಂದಾಪುರ ಚರ್ಚ್ ರಸ್ತೆಯಲ್ಲಿರುವ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.
ಪ್ರಜಾ ಸೋಶಿಯಲಿಸ್ಟ್ ಪಕ್ಷದ ಮೂಲಕ ರಾಜಕೀಯ ರಂಗ ಪ್ರವೇಶಿಸಿದ್ದ ಅವರು ಪುರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಆ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಎರಡು ಬಾರಿ ಕುಂದಾಪುರ ಕ್ಷೇತ್ರದ ಎಂಎಲ್ಎ ಆಗಿ ಸೇವೆ ಸಲ್ಲಿಸಿದ್ದರು.
ನಂತರ ವಿಧಾನಪರಿಷತ್ ಸದಸ್ಯೆಯಾಗಿಯೂ ಜವಾಬ್ದಾರಿ ನಿಭಾಯಿಸಿದ್ದರು. ಪ್ರಾಮಾಣಿಕತೆ, ಸರಳ ಸಜ್ಜನಿಕೆ ವ್ಯಕ್ತಿತ್ವ ಅವರು ಕುಂದಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆ ಆರಂಭಿಸಿದ ಕೀರ್ತಿಗೆ ಪಾತ್ರರಾಗಿದ್ದರು.
ಮೃತರು ಮೂವರು ಪುತ್ರಿಯರು, ಮೂವರು ಪುತ್ರರ ಸಹಿತ ಅಪಾರ ಬಂಧಮಿತ್ರರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಗುರುವಾರ ನಡೆಯುವ ಸಾಧ್ಯತೆ ಇದೆ.