ಮಂಗಳೂರು, ಏ 29 (DaijiworldNews/SM): ಬೋಳೂರು ಸುತ್ತಮುತ್ತಲ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ ಎನ್ನುವ ಸುದ್ದಿ ಹರಡುತ್ತಿದ್ದು, ಇದು ಸುಳ್ಳು ಸುದ್ದಿಯಾಗಿದೆ. ಇಲ್ಲಿಯ ತನಕ ಆ ಪ್ರದೇಶದಲ್ಲಿ ಸೀಲ್ ಡೌನ್ ಮಾಡಿರುವ ಬಗ್ಗೆ ಯಾವುದೇ ವರದಿಗಳಿಲ್ಲ.
ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಕೊರೊನಾ ನೆಗೆಟಿವ್ ವರದಿ ಲಭ್ಯವಾಗುತ್ತಿದ್ದರೂ ಕೂಡ ಬೋಳೂರು ಪ್ರದೇಶದಲ್ಲಿ ಕೊರೊನಾ ಆತಂಕ ಉಂಟಾಗಿದೆ. ಈಗಾಗಲೇ ಸಾಮಾಜಿಕ ಜಾಲ ತಾಣಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ ಎಂಬುವುದಾಗಿ ಸುಳ್ಳು ಸುದ್ದಿ ರವಾನೆಯಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತವಾಗಲಿ, ಆರೋಗ್ಯ ಇಲಾಖೆ, ವೆನ್ಲಾಕ್ ನಿಂದ ಯಾವುದೇ ವರದಿಗಳು ಲಭ್ಯವಾಗಿಲ್ಲ. ಆದರೂ ಜನ ಸುಳ್ಳು ಸುದ್ದಿಗಳು, ತಪ್ಪು ಸಂದೇಶಗಳನ್ನು ರವಾನಿಸುತ್ತಿದ್ದಾರೆ.
ಮಹಿಳೆಯಲ್ಲಿ ಕೊರೊನಾ ಶಂಕೆ:
ಇನ್ನು ಬೋಳೂರು ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಜಿಲ್ಲಾಡಳಿತ, ಇಲಾಖೆಯಿಂದ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಆದರೆ, ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಯೋರ್ವರಲ್ಲಿ ಸೋಂಕು ಇದೇ ಎನ್ನಲಾಗುತ್ತಿದೆ. ಜಿಲ್ಲಾಡಳಿತದ ವರದಿಗಾಗಿ ಎದುರುನೋಡಲಾಗುತ್ತಿದೆ.