ಮಂಗಳೂರು, ಏ 30 (DaijiworldNews/SM): ಬಂಟ್ವಾಳ ಪೇಟೆಯಿಂದಲೇ ಮೂರನೇ ಮಹಿಳೆ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಮೃತ ಮಹಿಳೆಯ ಶವ ಸಂಸ್ಕಾರ ಬೋಳೂರಿನ ಹಿಂದೂ ರುಧ್ರ ಭೂಮಿಯಲ್ಲೇ ನಡೆಸಲು ನಿರ್ಧರಿಸಲಾಗಿದೆ.
ಈ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸಭೆ ನಡೆಸಿ ನಿರ್ಧಾರವನ್ನು ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೋಳೂರು ಹಿಂದೂ ರುಧ್ರಭೂಮಿಯಲ್ಲೇ ಶವ ಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆ ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿದೆ.
ಆಸ್ಪತ್ರೆಯ ಎಲ್ಲಾ ಕಾರ್ಯಗಳು ಮುಗಿದ ಬಳಿಕ ಮೃತದೇಹದ ಹಸ್ತಾಂತರ ಕಾರ್ಯ ನಡೆಯಲಿದೆ. ಬಳಿಕ ಜಿಲ್ಲಾಡಳಿತ ಎಲ್ಲಾ ರೀತಿಯ ಭದ್ರತಾ ಕ್ರಮ ಕೈಗೊಂಡು ಅಂತ್ಯ ಸಂಸ್ಕಾರವನ್ನು ನೆರವೇರಿಸಲಿದೆ.
ಇನ್ನು ಈ ಹಿಂದೆ ಬಂಟ್ವಾಳದ ಮಹಿಳೆ ಮೃತಪಟ್ಟ ಸಂದರ್ಭ(ಎರಡನೇ ಬಲಿ) ಮೃತದೇಹದ ಅಂತ್ಯ ಸಂಸ್ಕಾರದ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ವಿವಾದಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಭೆ ನಡೆಸಿ ಬೋಳೂರಿನಲ್ಲೇ ಅಂತ್ಯ ಸಂಸ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ.