ಬೆಂಗಳೂರು : ವಿದ್ಯಾರ್ಥಿಗಳಿಗೆ ಇನ್ಮುಂದೆ ತಮ್ಮ ಅಂಕಪಟ್ಟಿಯನ್ನು ಕ್ಷಣ ಮಾತ್ರದಲ್ಲಿ ಪಡೆಯಬಹುದು . ಇದಕ್ಕಾಗಿ ಕೇಂದ್ರ ಸರ್ಕಾರ ಡಿಜಿಲಾಕರ್ ಆಪ್ ವ್ಯವಸ್ಥೆಯನ್ನು ಜಾರಿಗೆ ತರುತ್ತಿದ್ದು ಈ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.
ಪ್ರಾಥಮಿಕ ಹಂತದಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಅಂಕಪಟ್ಟಿಗಳನ್ನು ಆಪ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ. ನಂತರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಸಹ ವಿಸ್ತರಿಸುವ ಯೋಜನೆ ಇದೆ.
ಡಿಜಿ ಲಾಕರ್ ಆಪ್ ನ್ನು ಅಂಕಪಟ್ಟಿ ಡೌನ್ ಲೋಡ್ ಮಾಡಿಕೊಳ್ಳಲು ಅಳವಡಿಸಿಕೊಳ್ಳಲು ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದ್ದು ರಾಷ್ಟ್ರೀಯ ಮಾಹಿತಿ ಕೇಂದ್ರದ ನೆರವು ಪಡೆಯಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಮನವಿ ಮಾಡಿದೆ.