ಮ೦ಗಳೂರು, ಮೇ 5 (Daijiworld News/MSP): ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಬಿ. ಮುರಳೀಧರ್ ಪೈ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಕಳೆದ ಹದಿನೆಂಟು ತಿಂಗಳುಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಕಾಡ್ಲೂರು ಸತ್ಯನಾರಾಯಣಾಚಾರ್ಯ ಇವರು ಬೀದರ್ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ವರ್ಗಾವಣೆಗೊಂಡ ಪ್ರಯುಕ್ತ ಏ.೩೦ರಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಶಾರದಾ ಬಿ. ಇವರಿಗೆ ಹುದ್ದೆಯ ಪ್ರಭಾರವನ್ನು ಹಸ್ತಾಂತರಿಸಿದ್ದರು.
ಕರ್ನಾಟಕ ಹೈಕೋರ್ಟ್ ನ ಕಲಬುರ್ಗಿ ಪೀಠದಲ್ಲಿ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಮುರಳೀಧರ್ ಪೈ ಬಿ. ಇವರು ಮಾನ್ಯ ಕನಾ೯ಟಕ ಹೈಕೋರ್ಟ್ ನ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ವರ್ಗಾವಣೆಗೊಂಡಿದ್ದು ಸೋಮವಾರ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಶ್ರೀಮತಿ ಶಾರದಾ ಬಿ. ಅವರಿಂದ ಅಧಿಕಾರ ಸ್ವೀಕರಿಸಿದರು.
ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿ ಶ್ರೀ ಬಿ. ಮುರಳೀಧರ್ ಪೈ ಅವರು ಈ ಹಿಂದೆ ಸೇವೆ ಸಲ್ಲಿಸಿದ್ದಾರೆ.