ಮಂಗಳೂರು, ಮೇ 06 (Daijiworld News/MB) : ಲಾಕ್ಡೌನ್ನಿಂದಾಗಿ ಸಂಕಷ್ಟದಲ್ಲಿದ್ದೇವೆ ನಮ್ಮನ್ನು ಊರಿಗೆ ಕಳುಹಿಸಿ ಕೊಡಿ ಎಂದು ಆಗ್ರಹಿಸಿ ಯು.ಪಿ, ಬಿಹಾರ ಮೂಲದ ಸಾವಿರಾರು ವಲಸೆ ಕಾರ್ಮಿಕರು ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪತ್ರಿಭಟನೆ ನಡೆಸಿದ್ದಾರೆ.
ಲಾಕ್ಡೌನ್ನಿಂದಾಗಿ ಆಹಾರವಿಲ್ಲದೆಯೇ ಸಂಕಷ್ಟದಲ್ಲಿದ್ದೇವೆ. ನಮ್ಮನ್ನು ಊರಿಗೆ ಕಳುಹಿಸಿಕೊಡಿ ಎಂದು ವಲಸೆ ಕಾರ್ಮಿಕರು ಆಗ್ರಹಿಸಿದ್ದಾರೆ.
ಸಾಮಾಜಿಕ ಅಂತರವಿಲ್ಲದೆಯೇ ಪ್ರತಿಭಟನೆ ನಡೆಸುತ್ತಿರುವ ವಲಸೆ ಕಾರ್ಮಿಕರನ್ನು ಪೊಲೀಸರು ಸ್ಥಳದಿಂದ ಚದುರಿಸುವ ಕಾರ್ಯ ನಡೆಸುತ್ತಿದ್ದಾರೆ.