ಮಂಗಳೂರು, ಮೇ 07 (DaijiworldNews/SM): ಕೊರೊನಾ ಲಾಕ್ ಡೌನ್ ಸಂಕಷ್ಟದಿಂದಾಗಿ ವಲಸೆ ಕಾರ್ಮಿಕರ ವಿಷಯದಲ್ಲಿ ಖಾದರ್ ಗೊಂದಲ ಸೃಷ್ಟಿಸುತ್ತಿದ್ದಾರೆ. ಅಧಿಕಾರಿಗಳ ಸ್ಪಷ್ಟನೆಯ ಬಳಿಕವೂ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿರುವುದು ಯಾಕೆ? ಎಂದು ಶಾಸಕ ವೇದವ್ಯಾಸ್ ಕಾಮತ್ ಪ್ರಶ್ನಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿರುವ ಅವರು, ರೈಲು ನಿಲ್ದಾಣದ ಒಳಗೆ ಯುವ ಕಾಂಗ್ರೆಸ್ ಅಧ್ಯಕ್ಷರಿಂದ ಭಾಷಣ ಮಾಡಿದ್ದಾರೆ. ಅವರಿಗೆ ಮೈಕ್ ಹಿಡಿದು ಭಾಷಣ ಮಾಡಲು ಅನುಮತಿ ನೀಡಿದ್ದು ಯಾರು? ಎಂದು ಶಾಸಕರು ಪ್ರಶ್ನಿಸಿದ್ದಾರೆ.
ಕಾರ್ಮಿಕರನ್ನು ಆಯಾ ಜಿಲ್ಲೆ, ರಾಜ್ಯಗಳಿಗೆ ಕಳುಹಿಸುವ ವ್ಯವಸ್ಥೆ ನಡೆಯುತ್ತಿದೆ. ಕಾಂಗ್ರೆಸ್ ತಪ್ಪು ಮಾಹಿತಿ ನೀಡುವ ಮೂಲಕ ಕಾರ್ಮಿಕರನ್ನು ಹಾದಿ ತಪ್ಪಿಸುತ್ತಿದೆ. ಮಂಗಳೂರು ನಗರದಲ್ಲಿ ಕೆಲವು ಅಭಿವೃದ್ಧಿ ಕಾರ್ಯಗಳು ತುರ್ತಾಗಿ ನಡೆಯಬೇಕಿದೆ. ಕಾರ್ಮಿಕರಿಗೆ ಕಾಂಗ್ರೆಸ್ ತಪ್ಪು ಮಾಹಿತಿ ನೀಡಿ ಊರಿಗೆ ಕಳುಹಿಸುತ್ತಿದೆ. ಆ ಮೂಲಕ ಅಭಿವೃದ್ಧಿ ಕಾಮಗಾರಿಗಳಿಗೆ ಕಾಂಗ್ರೆಸ್ ಷಡ್ಯಂತ್ರ ನಡೆಸಿ ಅಡ್ಡಿಪಡಿಸುತ್ತಿದೆ ಎಂದು ಮಂಗಳೂರಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ಆರೋಪ ಮಾಡಿದ್ದಾರೆ.