ಮಂಗಳೂರು, ಮೇ 09 (DaijiworldNews/SM): ದ.ಕ. ಜಿಲ್ಲೆಯಲ್ಲಿ ಈಗಾಗಲೇ 15 ಮಂದಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಜಿಲ್ಲಾಡಳಿತ ವರದಿ ಪ್ರಕಟಿಸಿದ್ದು, ಕುಲಶೇಖರದ 80 ವರ್ಷದ ಮಹಿಳೆಯ ಆರೋಗ್ಯ ಸ್ಥಿತಿ ನಾಜೂಕಾಗಿದ್ದು, ಬೋಳೂರಿನ 58 ವರ್ಷದ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದೆ.
ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಒಟ್ಟು 15 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ 13 ಮಂದಿಯ ಆರೋಗ್ಯ ಸ್ಥಿತಿ ತೃಪ್ತಿದಾಯಕವಾಗಿದೆ. ಆದರೆ, ರೋಗಿ ಸಂಖ್ಯೆ-507 ಕುಲಶೇಖರ ಮೂಲದ 80 ವರ್ಷದ ಮಹಿಳೆ ಅಧಿಕ ರಕ್ತದೊತ್ತಡ ಹಾಗೂ ಪಾರ್ಶ್ವ ವಾಯುವಿನಿಂದ ಬಳಲುತ್ತಿದ್ದಾರೆ. ಇವರ ಆರೋಗ್ಯ ಸ್ಥಿತಿ ನಾಜೂಕಾಗಿದೆ.
ಇನ್ನು ರೋಗಿ ಸಂಖ್ಯೆ 536 ಬೋಳೂರಿನ 58 ವರ್ಷದ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಮಹಿಳೆ ಮೆದುಳಿನ ಸೋಂಕಿನಿಂದಲೂ ಕೂಡ ಬಳಲುತ್ತಿದ್ದಾರೆ. ಸದ್ಯ ಅವರಿಗೆ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದ್ದೆ. ಆರೋಗ್ಯ ಇಲಾಖೆ ಎಲ್ಲರ ಮೇಲೂ ನಿಗಾ ವಹಿಸಿದೆ.