ಉಳ್ಳಾಲ, ಮೇ 09 (DaijiworldNews/SM): ಸೋಮೇಶ್ವರ ಪುರಸಭೆ ವ್ಯಾಪ್ತಿಯ ನಿವಾಸಿ ಯುವಕನನ್ನು ಅಸೌಖ್ಯದ ಹಿನ್ನೆಲೆಯಲ್ಲಿ ನಗರದ ಕೋವಿಡ್ ಆಸ್ಪತ್ರೆಗೆ ಶನಿವಾರ ಸಂಜೆ ದಾಖಲಿಸಲಾಗಿದೆ. ಇದರಿಂದಾಗಿ ಪರಿಸರದ ನಿವಾಸಿಗಳು ಆತಂಕಗೊಂಡಿದ್ದಾರೆ.
21ರ ಹರೆಯದ ಯುವಕನಿಗೆ ತೀವ್ರ ಉಸಿರಾಟದ ತೊಂದರೆಯಿದ್ದ ಹಿನ್ನೆಲೆಯಲ್ಲಿ ಆತನ ತಾಯಿ ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ದಿದ್ದರು. ಅಲ್ಲಿ ಆಸ್ಪತ್ರೆಯ ವೈದ್ಯರು ಸಂಶಯ ವ್ಯಕ್ತಪಡಿಸಿ ಮಂಗಳೂರು ಕೋವಿಡ್ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಈ ಯುವಕ ಕಳೆದ ಕೆಲ ದಿನಗಳಿಂದ ಬಂಟ್ವಾಳದ ಸಿದ್ದಕಟ್ಟೆಯಲ್ಲಿದ್ದ ಎಂಬ ಮಾಹಿತಿ ಇದೆ. ಗುರುವಾರ ಅಸೌಖ್ಯವಿದ್ದ ಕಾರಣ ಮನೆಗೆ ಬಂದಿದ್ದನೆಂದು ಸ್ಥಳೀಯರು ತಿಳಿಸಿದ್ದಾರೆ. ಈತನ ವರದಿಗಾಗಿ ಸ್ಥಳೀಯರು ಎದುರು ನೋಡುತ್ತಿದ್ದಾರೆ.