ಕಾಸರಗೋಡು, ಮೇ 10 (Daijiworld News/MB) : ಕೊರೊನಾ ಸೋಂಕಿನ ಭೀತಿಗೆ ಕಾರಣವಾಗಿದ್ದ ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ ಒರ್ವ ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಕಾಸರಗೋಡು ಕೊರೊನಾ ಮುಕ್ತ ಜಿಲ್ಲೆಯಾಗಿದೆ. ಈ ಮೂಲಕ ದೇಶಕ್ಕೆ ಮಾದರಿಯಾಗಿದೆ.
ಕೇರಳದ ಒಟ್ಟು 505 ಕೊರೊನಾ ಪ್ರಕರಣಗಳ ಪೈಕಿ ಕಾಸರಗೋಡು ಜಿಲ್ಲೆಯೊಂದರಲ್ಲೇ 178 ಕೊರೊನಾ ಪ್ರಕರಣಗಳು ದೃಢಪಟ್ಟಿತ್ತು. ಇದೀಗ ಎಲ್ಲಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಳೆದ ಹತ್ತು ದಿನಗಳಿಂದ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪ್ರಕರಣಗಳು ದೃಢಪಟ್ಟಿಲ್ಲ.