ಮಂಗಳೂರು, ಮೇ 11 (DaijiworldNews/PY) : ದ.ಕ ಜಿಲ್ಲೆಯಲ್ಲಿ ಸೋಮವಾರವೂ ಗುಡ್ ನ್ಯೂಸ್ ಲಭಿಸಿದೆ. ಜಿಲ್ಲೆಯಲ್ಲಿ ಸೋಮವಾರದಂದು 124 ಪರೀಕ್ಷಾ ವರದಿಗಳು ಲಭ್ಯವಾಗಿದ್ದು, ಎಲ್ಲವೂ ನೆಗೆಟಿವ್ ಆಗುವ ಮೂಲಕ ಜನ ನಿರಾಳರಾಗಿದ್ದಾರೆ.
ಸೋಮವಾರದಂದು ಪಿ-489 ಅವರು ಗುಣಮುಖರಾಗಿ ವೆನ್ಲಾಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸೋಮವಾರದಂದು 68 ಮಂದಿಯ ಸ್ಯಾಂಪಲ್ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. 23 ಮಂದಿಯನ್ನು ನಿಗಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಲ್ಲಿಯ ತನಕ 2949 ಮಂದಿ ಫಿವರ್ ಕ್ಲಿನಿಕ್ಗಳಲ್ಲಿ ಪರೀಕ್ಷೆ ನಡೆಸಿದ್ದಾರೆ.
ಇನ್ನು ಸೋಮವಾರದಂದು 48 ಮಂದಿಯನ್ನು ಸ್ಕ್ರೀನಿಂಗ್ಗೆ ಒಳಪಡಿಸಲಾಗಿದೆ. 20 ಮಂದಿ ಎನ್ ಐಟಿಕೆಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ. 24 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿದ್ದಾರೆ. 6073 ಮಂದಿ 28 ದಿನಗಳ ಕ್ವಾರಂಟೈನ್ ಪೂರೈಸಿದ್ದಾರೆ.