ಮಂಗಳೂರು, ಮೇ 12 (Daijiworld News/MB) : ಮಂಗಳೂರು ಸೇರಿದಂತೆ ಉಡುಪಿ, ಮಡಿಕೇರಿ, ಕಾಸರಗೋಡು, ಉತ್ತರ ಕನ್ನಡ ಮೊದಲಾದ ಜಿಲ್ಲೆಗಳಲ್ಲಿ ಆತಂಕಕ್ಕೆ ಕಾರಣವಾಗಿರುವ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿನ 39 ಸಿಬ್ಬಂದಿಗಳ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.
ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಗೆ ಕೊರೊನಾ ದೃಢಪಟ್ಟ ಬಳಿಕ ಆಸ್ಪತ್ರೆಯನ್ನು ಸೀಲ್ಡೌನ್ ಮಾಡಲಾಗಿದ್ದು ಅಲ್ಲಿ ಚಿಕಿತ್ಸೆ ಪಡೆದವರ ಹಾಗೂ ಕೊರೊನಾ ಸೋಂಕಿತೆಯ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಫಸ್ಟ್ ನ್ಯೂರೋ ಆಸ್ಪತ್ರೆಯ ಸಿಬ್ಬಂದಿಗಳನ್ನು ಕ್ವಾರಂಟೈನ್ನಲ್ಲಿರಿಸಲಾಗಿದ್ದು ಸೋಮವಾರ 39 ಸಿಬ್ಬಂದಿಗಳ ಕೊರೊನಾ ವರದಿ ನೆಗೆಟಿವ್ ಬಂದಿದೆ. ಅವರೆಲ್ಲರೂ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಹಿಂತಿರುಗಿದ್ದಾರೆ.
ಬಂಟ್ವಾಳ, ಫಸ್ಟ್ ನ್ಯೂರೋ ಹಾಗೂ ಬೋಳೂರು ಪ್ರಕರಣಗಳಿಗೆ ಸಂಬಂಧಿಸಿದಂತೆ 1000ಕ್ಕೂ ಅಧಿಕ ಮಂದಿಯ ಗಂಟಲ ದ್ರವ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 17 ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ.