ಉಡುಪಿ, ಮೇ 12 (DaijiworldNews/SM): ಜಿಲ್ಲೆಯಲ್ಲಿರುವ ಚೆಕ್ ಪೋಸ್ಟ್ ಗಳನ್ನು ತಪ್ಪಿಸಿ ಜಿಲ್ಲೆಯ ಒಳಗೆ ಪ್ರವೇಶಿಸಿದವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಗಡಿಯಲ್ಲಿನ ಚೆಕ್ ಪೋಸ್ಟ್ ಗಳನ್ನು ತಪ್ಪಿಸಿ ಅನೇಕ ಜನರು ಉಡುಪಿ ಜಿಲ್ಲೆಗೆ ಪ್ರವೇಶಿಸಿದ್ದರು. ಈ ವ್ಯಕ್ತಿಗಳನ್ನು ಕಂಡುಹಿಡಿಯುವುದು ಮತ್ತು ಕ್ವಾರಂಟೈನ್ ಗೆ ಒಳಪಡಿಸುವುದು ದೊಡ್ಡ ಕಾರ್ಯವಾಗಿದೆ. ಪಂಚಾಯತ್ ಮಟ್ಟದಲ್ಲಿ ಗ್ರಾಮ ಸಮಿತಿಗಳು ಮತ್ತು ನಗರಸಭೆ ಮತ್ತು ಪುರಸಭೆ ಕಮಿಷನರ್ ಗಳಿಗೆ ಇದರ ಉಸ್ತುವಾರಿ ವಹಿಸಲಾಗಿದೆ ಎಂದರು.
ಸಾರ್ವಜನಿಕರು ಈ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಬಹುದು. ಚೆಕ್ ಪೋಸ್ಟ್ ತಪ್ಪಿಸಿ ಬಂದವರನ್ನು ತಕ್ಷಣ ಗುರುತಿಸಲಾಗುವುದು ಮತ್ತು ಆರೋಗ್ಯ ತಪಾಸಣೆ ಸಹ ನಡೆಸಲಾಗುವುದು. ಅವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗುತ್ತದೆ. ಯಾರಾದರು ಅಂತಹವರು ಕಂಡುಬಂದಲ್ಲಿ ತಕ್ಷಣ ಸ್ಥಳೀಯಾಡಳಿತಕ್ಕೆ ಸಾರ್ವಜನಿಕರು ಮಾಹಿತಿ ನೀಡಬೇಕೆಂದು" ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.