ಮಂಗಳೂರು, ಮೇ 13 (Daijiworld News/MB) : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿಯಾಗಿದ್ದು ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಕೊರೋನಾದಿಂದಾಗಿ ಮೃತಪಟ್ಟಿದ್ದಾರೆ.
ಮಹಿಳೆಗೆ ಎಪ್ರಿಲ್ 30 ರಂದು ಕೊರೊನಾ ದೃಢಪಟ್ಟಿದ್ದು ಫಸ್ಟ್ ನ್ಯೂರೋ ಆಸ್ಪತ್ರೆಯ ಸ್ವೀಪರ್ ನ ಸಂಪರ್ಕದಿಂದ ಸೋಂಕು ಹರಡಿತ್ತು.
ಮೆದುಳು ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮೆದುಳಿನ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು.
ಕೊರೊನಾ ದೃಢಪಟ್ಟ ಬಳಿಕ ಮಂಗಳೂರಿನ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಈ ಹಿಂದೆ ಬಂಟ್ವಾಳದ ಮೂವರು ಸೋಂಕಿತರು ಬಲಿಯಾಗಿದ್ದರು.