ಮೂಡುಬಿದಿರೆ, ಮೇ 14 (Daijiworld News/MB) : ಮೂಡುಬಿದಿರೆ ತಾಲೂಕಿನ ತೋಡಾರಿನಲ್ಲಿ ನಿರ್ಮಾಣ ಹಂತದ ಕಟ್ಟಡದ 5ನೇ ಮಹಡಿಯಿಂದ ಬಿದ್ದು, ಕಾರ್ಮಿಕ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಮೃತ ಯುವಕನನ್ನು ತೋಡಾರು ಪಡೀಲ್ ಬಾಕಿಯಾರು ನಿವಾಸಿ ವಿನಯ್ ಪೂಜಾರಿ (32) ಎಂದು ಗುರುತಿಸಲಾಗಿದೆ.
ಈತ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿರುವ ವೇಳೆ, 5ನೇ ಮಹಡಿಯಿಂದ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.