ಮಂಗಳೂರು, ಮೇ 15 (Daijiworld News/MSP): ಮುಂದಿನ ಮೂರು ದಿನಗಳಲ್ಲಿ ಕರಾವಳಿಯಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರಾವಳಿಯಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದ್ದು, ಈ ಕಾರಣಕ್ಕಾಗಿ ಭಾರತೀಯ ಹವಾಮಾನ ಇಲಾಖೆ ಕರಾವಳಿಯಲ್ಲಿ "ಯಲ್ಲೋ ಅಲರ್ಟ್" ಘೋಷಿಸಿದೆ.
ಹವಾಮಾನ ಇಲಾಖೆಯ ಮಾಹಿತಿಯಂತೆ ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗದಲ್ಲಿ 64.5 ಮೀಮೀ ನಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಸಿಡಿಲಿನೊಂದಿಗೆ ಗಾಳಿ ಕೂಡಾ ಹೆಚ್ಚಾಗಿ ಇರಲಿದೆ.
ಇನ್ನು ಈ ಬಾರಿ ಅವಧಿಗೂ ಮುನ್ನ ಮುಂಗಾರು ಸಾಧ್ಯತೆ ಇದೆ. ನೈರುತ್ಯ ಬಂಗಾಕ ಕೊಲ್ಲಿಯಲ್ಲಿ ನಿಮ್ಮ ಒತ್ತಡದ ಪರಿಣಾಮ ವಾಯುಭಾರ ಕುಸಿತ ಉಂಟಾಗಿದ್ದು , ಒಂದೆರಡು ದಿನಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆ ಇದೆ. ಇದು ಮುಂಬರುವ ಮಂಗಾರು ಮಳೆಯ ಮೇಲೆ ಪರಿಣಾಮ ಬೀರಲಿದೆ.