ಮಂಗಳೂರು, ಮೇ 15 (Daijiworld News/MSP): ಈಗಾಗಲೇ ಫಸ್ಟ್ ನ್ಯೂರೋ ನಂಟಿನಿಂದ ದ.ಕ ಜಿಲ್ಲೆಯಲ್ಲಿ ವ್ಯಾಪಕಗೊಳ್ಳುತ್ತಿರುವ ಕೊರೊನಾ ಸೋಂಕು ಮೊದಲೇ ಆತಂಕಕ್ಕೆ ಒಳಗಾಗಿರಬೇಕಾದ್ರೆ ಇದೀಗ ದುಬೈನಿಂದ ಮಂಗಳೂರಿಗೆ ಆಗಮಿಸಿರುವ ಪ್ರಯಾಣಿಕರ ಪೈಕಿ ಬರೋಬ್ಬರಿ 15 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿರುವುದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.
ಮೇ.12 ರಂದು ವಿಶೇಷ ವಿಮಾನದ ಮೂಲಕ ಬಂದಿಳಿದ 179 ಮಂದಿ ಪೈಕಿ, ದ.ಕ ದ ಮೂಲದ 69 ಜನರ ಗಂಟಲಿನ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಪೈಕಿ 15 ಮಂದಿಗೆ ಕೊರೊನಾ ತಗುಲಿರುವುದು ಖಚಿತವಾಗಿದೆ. ಇವರಲ್ಲಿ 12 ಪುರುಷರಿಗೆ ಮತ್ತು 4 ಮಹಿಳೆಯರಿಗೆ ಸೋಂಕು ದೃಢವಾಗಿದೆ. ೧5 ಮಂದಿ ಪೈಕಿ ಓರ್ವರು ಉತ್ತರ ಕನ್ನಡ ಜಿಲ್ಲೆಯವರಾಗಿದ್ದಾರೆ. ಇದಲ್ಲದೆ ಸುರತ್ಕಲ್ ಮೂಲದ ಮಹಿಳೆಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ದ.ಕ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ದುಬೈನಿಂದ ಬಂದ 179ಕರಾವಳಿಗರನ್ನು ಮನೆಗೆ ತೆರಳಲು ಹಾಗೂ ಯಾರನ್ನು ಸಂಪರ್ಕಿಸಿಲು ಬಿಡದೆ, ಕ್ವಾರಂಟೈನ್ ಗೆ ಒಳಪಡಿಸಿತ್ತು. ಈ ಕ್ರಮದಿಂದ ಜಿಲ್ಲೆಯ ಜನರಿಗೆ ಕೊರೊನಾ ಹರಡುವ ಸಾಧ್ಯತೆ ಇರುವ ಕಡಿಮೆ ಇದೆ. ದುಬೈನಿಂದ ಬಂದ ವಿಮಾನದಲ್ಲಿ ದ.ಕ. ಜಿಲ್ಲೆಯ 96, ಉಡುಪಿ ಜಿಲ್ಲೆಯ 52 ಹಾಗೂ ಇತರ ಜಿಲ್ಲೆಗಳ 31 ಪ್ರಯಾಣಿಕರಿದ್ದರು. ಅವರಲ್ಲಿ 38 ಗರ್ಭಿಣಿಯರು, ವೈದ್ಯಕೀಯ ಚಿಕಿತ್ಸೆ ಪಡೆಯುವ ನಿರೀಕ್ಷೆಯಲ್ಲಿರುವವರು, ದುಬಾೖಯಲ್ಲಿ ಕೆಲಸ ಕಳೆದುಕೊಂಡವರು, ವೀಸಾ ಅವಧಿ ಮುಗಿದವರು, ಕುಟುಂಬ ಮೆಡಿಕಲ್ ಅಗತ್ಯ ಇರುವವರು, ಪ್ರವಾಸಕ್ಕೆ ಹೋಗಿ ಬಾಕಿಯಾದವರು ಇದರಲ್ಲಿ ಸೇರಿದ್ದಾರೆ
ದ.ಕ ಜಿಲ್ಲೆಯಲ್ಲಿ ಈವರೆಗೆ ಪತ್ತೆಯಾದ ಪಾಸಿಟಿವ್ ಕೇಸ್ ಗಳ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ