ಸುಳ್ಯ, ಮೇ 15 (Daijiworld News/MSP): ಬೆಳ್ಳಾರೆ ಠಾಣಾ ವ್ಯಾಪ್ತಿಯ ಮಾಸ್ತಿಕಟ್ಟೆ ಸಮೀಪ ಉಮಿಕ್ಕಳ ಎಂಬಲ್ಲಿ ಅಕ್ರಮ ಕಸಾಯಿ ಅಡ್ಡೆಗೆ ಬೆಳ್ಳಾರೆ ಪೊಲೀಸರು ಶುಕ್ರವಾರ ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಹಾರಿಸ್,ಮಹಮ್ಮದ್ ಸಿನಾನ್,ಉಮ್ಮರ್ ಫಾರೂಕ್ ಎಂದು ಗುರುತಿಸಲಾಗಿದೆ.
ಮಾಸ್ತಿಕಟ್ಟೆಯ ಮರದ ಅಡಿಯಲ್ಲಿ ದನದ ಮಾಂಸ ಮಾಡುವ ಖಚಿತ ಮಾಹಿತಿ ದೊರೆತ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಸುಮಾರು 40 ಕೆ.ಜಿ.ದನದ ಮಾಂಸ ಹಾಗೂ ಮಾಂಸ ಮಾಡಲು ಉಪಯೋಗಿಸಿದ ಕತ್ತಿ,ಚೂರಿ ಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ಸಂದರ್ಭ ಇಬ್ಬರು ಆರೋಪಿಗಳಾದ ಸಲಾಂ ಹಾಗೂ ಹೈದರಾಲಿ ಎಂಬಿಬ್ಬರು ತಪ್ಪಿಸಿಕೊಂಡಿದ್ದು ಪೊಲೀಸರು ಇವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.