ಕಾಸರಗೋಡು, ಮೇ 15 (DaijiworldNews/SM): ಜಿಲ್ಲೆಯಲ್ಲಿ ಶುಕ್ರವಾರ ಓರ್ವನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಅಜನೂರಿನ 39 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು, ಕುವೈಟ್ ನಿಂದ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಬಂದಿಳಿದು, ಕಲ್ಲಿಕೋಟೆ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಈ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ.
ಇದರಿಂದ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹದಿನೈದಕ್ಕೇರಿದೆ. ಈ ದಿನ ರೋಗಲಕ್ಷಣಗಳಿದ್ದ 16 ಮಂದಿಯನ್ನು ಐಸೋಲೇಷನ್ ವಾರ್ಡ್ ಗೆ ದಾಖಲಿಸಲಾಗಿದೆ. 1662 ಮಂದಿ ನಿಗಾದಲ್ಲಿದ್ದಾರೆ. 211 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ.