ಮಂಗಳೂರು, ಮೇ 18 (Daijiworld News/MB) : 'ಅಂಫಾನ್' ಚಂಡಮಾರುತದ ಕಾರಣದಿಂದಾಗಿ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದ ಕರಾವಳಿಯಾದ್ಯಂತ ಭಾನುವಾರ ಸಂಜೆಯಿಂದ ಗುಡುಗು, ಮಿಂಚು ಸಹಿತ ಗಾಳಿ ಮಳೆ ಸುರಿಯಲಾರಂಭಿಸಿದೆ.
'ಅಂಫಾನ್' ಚಂಡಮಾರುತವೂ ಮೇ 18ರಂದು ತೀವ್ರ ಸ್ವರೂಪ ಪಡೆಯಲಿದ್ದು ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳಲ್ಲಿ ಕರಾವಳಿಯಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದ್ದು ಈ ಕಾರಣಕ್ಕಾಗಿ ಭಾರತೀಯ ಹವಾಮಾನ ಇಲಾಖೆ ಕರಾವಳಿಯಲ್ಲಿ "ಯಲ್ಲೋ ಅಲರ್ಟ್" ಘೋಷಿಸಿತ್ತು.
ಮುಂದಿನ ಮೂರು ದಿನಗಳ ಕಾಲ ರಾವಳಿ ಭಾಗದಲ್ಲಿ 64.5 ಮೀಮೀ ನಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಸಿಡಿಲಿನೊಂದಿಗೆ ಗಾಳಿ ಕೂಡಾ ಹೆಚ್ಚಾಗಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.