ಮಂಗಳೂರು, ಮೇ 18 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮತ್ತೊಬ್ಬ ಕೊರೊನಾ ಸೋಂಕಿತ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಬಂಟ್ವಾಳ ನಿವಾಸಿ 69 ವರ್ಷದ ಸೋಂಕಿತ ವ್ಯಕ್ತಿ ನಿರಂತರ ಚಿಕಿತ್ಸೆಯ ಬಳಿಕ ಇದೀಗ ಗುಣಮುಖರಾಗಿದ್ದಾರೆ. ಸುಮಾರು 18 ದಿನಗಳ ಕಾಲ ವ್ಯಕ್ತಿಗೆ ವೆನ್ಲಾಕ್ ಆಸ್ಪತ್ರೆಯಿಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆಗೆ ಸ್ಪಂಧಿಸಿರುವ ವ್ಯಕ್ತಿ ಇದೀಗ ಗುಣಮುಖರಾಗಿ ಬಿಡುಗಡೆಹೊಂದಿದ್ದಾರೆ.
ಇವರು ಬಂಟ್ವಾಳದ ಮೃತಪಟ್ಟ ಮಹಿಳೆಯ ಸಂಬಂಧಿ ಹಾಗೂ ನೆರೆಮನೆಯ ವ್ಯಕ್ತಿಯಾಗಿದ್ದಾರೆ. ಏಪ್ರಿಲ್ 29ರಂದು ಇವರಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದಿದ್ದವು. ಈ ಹಿನ್ನೆಲೆಯಲ್ಲಿ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆಗೆ ರವಾನೆ ಮಾಡಲಾಗಿತ್ತು. ಮೇ 1ರಂದು ವರದಿ ಲಭ್ಯವಾಗಿದ್ದು, ಪಾಸಿಟಿವ್ ದೃಢಪಟ್ಟಿದೆ.
ಇನ್ನು ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆ ವೆನ್ಲಾಕ್ ಗೆ ದಾಖಲಿಸಲಾಗಿದೆ. ನಿರಂತರ ಚಿಕಿತ್ಸೆ ಬಳಿಕ ಇದೀಗ ಅವರು ಗುಣಮುಖರಾಗಿದ್ದಾರೆ. ಮೇ 14, 16ರಂದು ಮತ್ತೆ ಗಂಟಲ ದ್ರವದ ಮಾದರಿ ಪರೀಕ್ಷೆಗೆ ರವಾನಿಸಲಾಗಿದೆ. ಎರಡೂ ಪರೀಕ್ಷೆಯ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಬಂಟ್ವಾಳದ ವ್ಯಕ್ತಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.