ಮಂಗಳೂರು, ಮೇ 18 (DaijiworldNews/SM): ಮಂಗಳವಾರದಿಂದ ಮಂಗಳೂರು ಕೆ.ಎಸ್.ಆರ್.ಟಿ.ಸಿ. ಡಿಪೋದಿಂದ ಅಗತ್ಯ ಪ್ರದೇಶಗಳಿಗೆ ಬಸ್ ಸಂಚಾರ ಇರಲಿದೆ ಎಂದು ಕೆ.ಎಸ್.ಆರ್.ಟಿ.ಸಿ. ಡಿಸಿ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.
ದೈಜಿವರ್ಲ್ಡ್ ಗೆ ಪ್ರತಿಕ್ರಿಯೆ ನೀಡಿರುವ ಅವರು, ಮೊದಲ ಹಂತದಲ್ಲಿ ಜನರ ಬೇಡಿಕೆಗೆ ಅನುಗುಣವಾಗಿ ಅಗತ್ಯವಿರುವ ಪ್ರದೇಶಗಳಿಗೆ ಮಾತ್ರವೇ ಬಸ್ ಗಳು ಸಂಚಾರ ನಡೆಸಲಿವೆ. ಮಂಗಳೂರು ನಗರದೊಳಗೆ ನರ್ಮ್ ಬಸ್ ಗಳ ಸಂಚಾರ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮೊದಲ ಹಂತದಲ್ಲಿ ಮಂಗಳೂರಿನಿಂದ ಜಿಲ್ಲೆಯ ಇತರ ದೂರದ ಪ್ರದೇಶಗಳಿಗೆ ತೆರಳುವ ಬಸ್ ಗಳು ಮಾತ್ರವೇ ಬೇಡಿಕೆಗೆ ಅನುಗುಣವಾಗಿ ಸಂಚಾರ ನಡೆಸಲಿವೆ. ಮುಂದಿನ ದಿನಗಳಲ್ಲಿ ಪ್ರಯಾಣಿಕರ ಪ್ರತಿಕ್ರಿಯೆಯನ್ನು ಗಮನಿಸಿ ಹಂತ ಹಂತವಾಗಿ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಕೆ.ಎಸ್.ಆರ್.ಟಿ.ಸಿ. ಡಿಸಿ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.