ಉಡುಪಿ, ಮೇ 19 (Daijiworld News/MSP): ಉಡುಪಿ ಜಿಲ್ಲೆಯಲ್ಲಿ ಮತ್ತೆ ಐವರಲ್ಲಿ ಕೊರೊನಾ ಸೋಂಕು ಮಂಗಳವಾರ ಪತ್ತೆಯಾಗಿದೆ . ಮಹಾರಾಷ್ಟ್ರ ದಿಂದ ಉಡುಪಿ ಜಿಲ್ಲೆಗೆ ಆಗಮಿಸಿ ಕ್ವಾರಂಟ್ಯೆನ್ ನಲ್ಲಿದ್ದ ನಾಲ್ವರಿಗೆ ಹಾಗೂ ಚಿತ್ರದುರ್ಗದ ಮೂಲದ ಬಾಲಕಿಯಲ್ಲಿ ಕೋವಿಡ್`-19 ಸೋಂಕು ಕಾಣಿಸಿಕೊಂಡಿದೆ..
24 ವರ್ಷದ ಪುರುಷ, 24 ವರ್ಷದ ಮಹಿಳೆ, ಎಂಟು ವರ್ಷದ ಮಗು, 38 ವರ್ಷದ ಪುರುಷನಲ್ಲಿ ಸೋಂಕು ಕಾಣಿಸಿಕೊಂಡಿದೆ. ಇವರೆಲ್ಲರನ್ನೂ ನಿಗದಿತ ಕೊವೀಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ. ಇನ್ನು ಚಿತ್ರದುರ್ಗದ 17 ವರ್ಷದ ಬಾಲಕಿಯೂ ಮೇ 16 ರಂದು ಕ್ಯಾನ್ಸರ್ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿದ್ದು ಆಕೆಯನ್ನು ಪರೀಕ್ಷೆಗೆ ಒಳಪಡಿಸಿದಾಗ್ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆಕೆಯನ್ನು ಡಾ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿಯಲ್ಲಿ 16 ಕೊರೊನಾ ಪ್ರಕರಣ ದೃಢಪಟ್ಟಿದ್ದು ಈ ಪೈಕಿ 3 ಮಂದಿ ಗುಣಮುಖರಾಗಿದ್ದಾರೆ. 12 ಸಕ್ರಿಯ ಪ್ರಕರಣಗಳಿದ್ದು ಓರ್ವ ಮೃತಪಟ್ಟಿದ್ದಾನೆ.