ಬಂಟ್ವಾಳ, ಮೇ 19 (DaijiworldNews/SM): ಹೊರ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್ ಕಡ್ಡಾಯವಾಗಿದ್ದು, ಸರಕಾರಿ ಹಾಗೂ ಹೋಟೆಲ್ ಕ್ವಾರಂಟೈನ್ ನಲ್ಲಿ ಈಗಾಗಲೇ ಹಲವಾರು ಮಂದಿ ಇದ್ದಾರೆ. ಕ್ವಾರಂಟೈನ್ ನಲ್ಲಿರುವವರು ಹೊರಗಡೆ ಬಂದು ಓಡಾಟ ನಡೆಸುವಂತಿಲ್ಲ. ಒಂದೊಮ್ಮೆ ನಿಯಮ ಉಲ್ಲಂಘಿಸಿ ಓಡಾಟ ನಡೆಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಚ್ಚರಿಕೆ ನೀಡಿದ್ದಾರೆ.
ಕ್ವಾರಂಟೈನ್ ನಲ್ಲಿರುವವರು ಹೊರಗಡೆ ಓಡಾಟ ನಡೆಸಿದ್ದಲ್ಲಿ ಸೆಕ್ಷನ್ 188 ಪ್ರಕಾರ ಕ್ರಿಮಿನಲ್ ಕೇಸು ದಾಖಲಿಸಲಾಗುವುದು ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ಸರಕಾರದ ಆದೇಶದ ಪ್ರಕಾರ ಕ್ವಾರಂಟೈನ್ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿ ಸುತ್ತಾಟ ನಡೆಸಿದ್ರೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು.
ಹೊರರಾಜ್ಯದಿಂದ ಬಂದಿರುವ ಗರ್ಭಿಣಿಯರು, ಹಿರಿಯ ವ್ಯಕ್ತಿಗಳು, ಮಕ್ಕಳ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗುತ್ತದೆ. ನೆಗೆಟಿವ್ ಬಂದವರನ್ನು ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತದೆ. ಅಂತಹ ವ್ಯಕ್ತಿಗಳು ಕೂಡಾ ತಿರುಗಾಟ ನಡೆಸಬಾರದು. ತಿರುಗಾಟ ನಡೆಸಿದ್ರೆ ಅವರ ವಿರುದ್ದವೂ ಪ್ರಕರಣ ದಾಖಲಿಸುತ್ತೇವೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಎಚ್ಚರಿಕೆ ನೀಡಿದ್ದಾರೆ.