ಕಾಸರಗೋಡು, ಮೇ 21 (DaijiworldNews/SM): ಜಿಲ್ಲೆಯಲ್ಲಿ ಗುರುವಾರ ಓರ್ವನಿಗೆ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಮೇ 15ರಂದು ದುಬೈಯಿಂದ ಬಂದಿದ್ದ ಚೆಂಗಳ ನಿವಾಸಿಗೆ ಸೋಂಕು ತಗಳಿದ್ದು, ಇವರು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದರು. ಕೇರಳದಲ್ಲಿ ಗುರುವಾರ 24 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈ ಪೈಕಿ 14 ಮಂದಿ ವಿದೇಶದಿಂದ ಬಂದವರಾಗಿದ್ದಾರೆ. ಉಳಿದವರು ಹೊರ ರಾಜ್ಯಗಳಿಂದ ಬಂದವರಾಗಿದ್ದಾರೆ. ಜಿಲ್ಲೆಯಲ್ಲಿ 2460 ಮಂದಿ ನಿಗಾದಲ್ಲಿದ್ದು, ಈ ಪೈಕಿ 453 ಮಂದಿ ಐಸೋಲೇಷನ್ ವಾರ್ಡ್ ನಲ್ಲಿದ್ದಾರೆ.