ಮಂಗಳೂರು, ಮೇ 21 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮತ್ತೊಬ್ಬ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದಾರೆ. ಕುಲಶೇಖರ ನಿವಾಸಿ 45ವರ್ಷದ ವ್ಯಕ್ತಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಸೋಂಕು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಏಪ್ರಿಲ್ 23ರಂದು ವೆನ್ಲಾಕ್ ಕೊರೊನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಐಸೋಲೇಷನ್ ವಾರ್ಡ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಿರಂತರ ಚಿಕಿತ್ಸೆಯ ಬಳಿಕ ಕುಲಶೇಖರದ ವ್ಯಕ್ತಿ ಇದೀಗ ಗುಣಮುಖರಾಗಿದ್ದಾರೆ. ಇದೀಗ ಸಂಪೂರ್ಣ ಗುಣಮುಖರಾದ ವ್ಯಕ್ತಿ ಗುರುವಾರದಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಇನ್ನು ಬುಧವಾರವೂ ಕೂಡ ಜಿಲ್ಲೆಯಲ್ಲಿ ಮೂವರು ಬಿಡುಗಡೆಗೊಂಡಿದ್ದರು. ಆ ಮೂಲಕ ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ 21ಕ್ಕೆ ಏರಿಕೆಯಾದಂತಾಗಿದೆ.