ಮಂಗಳೂರು, ಮೇ 21 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮೇ 21ರ ಗುರುವಾರದಂದು 502 ಮಂದಿಯ ಕೊರೊನಾ ಪರೀಕ್ಷಾ ವರದಿ ಲಭ್ಯವಾಗಿದ್ದು, 496 ಮಂದಿಯ ವರದಿ ನೆಗೆಟಿವ್ ಬಂದಿದ್ದು, ಜಿಲ್ಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಕೊರೊನಾ ರಿಲೀಫ್ ಸಿಕ್ಕಂತಾಗಿದೆ.
ಗುರುವಾರದಂದು ಮಧ್ಯಾಹ್ನ ಕರ್ನಾಟಕ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ್ದ ವರದಿಯಲ್ಲಿ 6 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ಆದರೆ, ಇದರೊಂದಿಗೆ ಇಂದು ಸಂಜೆ ದೊರೆತ ವರದಿಯಲ್ಲಿ 496 ಮಂದಿಯ ವರದಿ ನೆಗೆಟಿವ್ ಆಗಿದ್ದು, ಜಿಲ್ಲೆಯ ಜನತೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.
ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 61 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು, ಈ ಪೈಕಿ 6 ಮಂದಿ ಹೊರ ಜಿಲ್ಲೆಯವರಾಗಿದ್ದಾರೆ. ಇನ್ನು ಸದ್ಯ 35 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಐವರು ಸೋಂಕಿಗೆ ಬಲಿಯಾಗಿದ್ದಾರೆ. ಹೊರ ಜಿಲ್ಲೆಯ ಆರು ಮಂದಿ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 21 ಮಂದಿ ಗುಣಮುಖರಾಗಿದ್ದಾರೆ. ಈ ದಿನ 333 ಮಂದಿಯ ವರದಿ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಜಿಲ್ಲಾಡಳಿತರ ಅಧಿಕೃತ ವರದಿ ತಿಳಿಸಿದೆ.
ಇನ್ನು ಗುರುವಾರದಂದು 171 ಮಂದಿಯನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. 32 ಮಂದಿಯನ್ನು ಎನ್ ಐಟಿಕೆಯಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 14 ಮಂದಿ ಇ ಎಸ್ ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ.