ಮಂಗಳೂರು: ಮೇ 22 (Daijiworld News/MSP) : ಮುಂಬೈ ಸಂಪರ್ಕದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಸೋಂಕು ದೃಢಪಟ್ಟಿದೆ. ಥಾಣೆ ದೊಂಬಿವಲಿಯಿಂದ ಬಂದಿದ್ದ ಬೆಳ್ತಂಗಡಿ ತಾಲ್ಲೂಕಿನ ಅರಂಬೋಡಿ ಗ್ರಾಮದ 29 ವರ್ಷದ ಯುವತಿಯಲ್ಲಿ ಸೋಂಕು ದೃಢಪಟ್ಟಿದೆ .
ಸದ್ಯ ಯುವತಿ ಜಿಲ್ಲಾಡಳಿತದ ವತಿಯಿಂದ ಬೆಳ್ತಂಗಡಿಯಲ್ಲಿ ಸ್ಥಾಪಿಸಲಾಗಿರುವ ಕ್ವಾರಂಟೈನ್ ಕೇಂದ್ರದಲ್ಲಿ ಇವರ ಗಂಟಲು ದ್ರವದ ಪರೀಕ್ಷೆಗೊಳಪಡಿಸಿದಾಗ ಕೊರೊನಾ ದೃಢವಾಗಿದೆ. ಸದ್ಯ ಇವರಿಗೆ ಸೂಕ್ತ ಚಿಕಿತ್ಸೆ ನೀಡುವ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ.
ದ.ಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ ಇದೀಗ 62ಕ್ಕೆ ಏರಿದೆ. ಇಂದು ಉಡುಪಿಯಲ್ಲಿ ಯಾವುದೇ ಕೊರೊನಾ ಪ್ರಕರಣ ದೃಢವಾಗಿಲ್ಲ