ಮಂಗಳೂರು, ಮೇ 22 (DaijiworldNews/PY) : ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತಕ್ಕೆ ಇಂದಿಗೆ ಹತ್ತು ವರ್ಷ. ಈ ದುರಂತದಲ್ಲಿ ಮಡಿದವರ ಸ್ಮರಣಾರ್ಥ ಇಂದು ಕೂಳೂರು- ತಣ್ಣೀರುಬಾವಿ ರಸ್ತೆಯಲ್ಲಿರುವ ಸ್ಮಾರಕ ಸ್ಥಳದಲ್ಲಿ ವಾರ್ಷಿಕ ಸಂಸ್ಮರಣೆ ಕಾರ್ಯಕ್ರಮ ನಡೆಯಿತು.
ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದ.ಕ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್, ಸಂಸದ ನಳಿನ್ ಕುಮಾರ್ ಕಟೀಲ್, ಡಿಸಿಪಿ ಲಕ್ಷ್ಮಿ ಗಣೇಶ್ ಹಾಗೂ ವಿಮಾನ ನಿಲ್ದಾಣ ಸಿಬ್ಬಂದಿಗಳು ವಿಮಾನ ದುರಂತದಲ್ಲಿ ಅಗಲಿದವರಿಗೆ ಶ್ರದ್ದಾಂಜಲಿ ಸಲ್ಲಿಸಿದರು.
2010 ಮೇ 22 ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ವಿಮಾನ ರನ್ವೇನಲ್ಲಿ ನಿಲ್ಲದೇ ಸೂಚನಾಗೋಪುರಕ್ಕೆ ಢಿಕ್ಕಿ ಹೊಡೆದು ಪ್ರಪಾತಕ್ಕೆ ಬಿದ್ದಿತ್ತು. ದುರಂತದಲ್ಲಿ 158 ಮಂದಿ ಮೃತಪಟ್ಟಿದ್ದು, ಎಂಟು ಮಂದಿ ಮಾತ್ರ ಬದುಕುಳಿದಿದ್ದರು.