ಮಂಗಳೂರು, ಮೇ 22 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮೇ 24ರ ರವಿವಾರದಂದು ಈದುಲ್ ಫಿತ್ರ್ ಆಚರಣೆಗೆ ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಝರಿ ತೀರ್ಮಾನಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರಕಟನೆ ನೀಡಿರುವ ಅವರು, ಶವ್ವಾಲ್ ತಿಂಗಳ ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ ಮೇ 23ರ ಶನಿವಾರದಂದು ಮುಸ್ಲಿಂ ಬಾಂಧವರು 30ನೇ ಉಪವಾಸ ಪೂರ್ಣಗೊಳಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ 24ರ ರವಿವಾರದಂದು ಈದುಲ್ ಫಿತ್ರ್ ಹಬ್ಬ ಆಚರಿಸಲು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಝರಿ ಉಸ್ತಾದ್ ಕರೆ ನೀಡಿದ್ದಾರೆ.
ಈ ಬಗ್ಗೆ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ಗಾ ಮಸೀದಿ ಮಂಗಳೂರು ಇಲ್ಲಿನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇನ್ನು ಉಡುಪಿ ಜಿಲ್ಲೆಯಲ್ಲೂ ಕೂಡ ರವಿವಾರದಂದೇ ಈದುಲ್ ಫಿತ್ರ್ ಆಚರಣೆಗೆ ಅಲ್ ಹಾಜ್ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಕರೆ ನೀಡಿದ್ದಾರೆ.