ಮಂಗಳೂರು, ಮೇ 23 (DaijiworldNews/SM): ಕರಾವಳಿ ಮೂಲದ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಮೃತಪಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪೆರುವಾಯಿ ಆಂಗ್ಲಕೋಡಿ ನಿವಾಸಿ ಥೋಮಸ್ ಡಿಸೋಜ ಮೃತ ವ್ಯಕ್ತಿ.
ಥೋಮಸ್ ಡಿಸೋಜ ಕಳೆದ ಹಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದರು. ಶುಕ್ರವಾರ ಸಂಜೆ ಅವರಲ್ಲಿ ಅನಾರೋಗ್ಯ ಕಾಣಿಸಿಕೊಂಡಿದ್ದು, ಇಂದು ಮೃತಪಟ್ಟಿದ್ದಾರೆ ಎಂದು ಅವರ ಸಹೋದರ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಲ್ಫ್ ಡಿಸೋಜ ದೈಜಿವರ್ಲ್ಡ್ ಗೆ ಮಾಹಿತಿ ನೀಡಿದ್ದಾರೆ.
ಇನ್ನು ಮೃತರು ಸಹೃದಯಿ ದಾನಿಯಾಗಿದ್ದುಕೊಂಡು ಹಲವಾರು ಬಡಕುಟುಂಬಗಳಿಗೆ ನೆರವಾಗಿದ್ದರು. ಅಲ್ಲದೆ, ಚರ್ಚ್ ನ ಕಾರ್ಯಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ವಹಿಸಿಕೊಳ್ಳುತ್ತಿದ್ದರು. ಮೃತರು ತಾಯಿ, ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.
ಇವರ ಸಾವಿನ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.