ಕಾಸರಗೋಡು, ಮೇ 23 (Daijiworld News/MSP): ಜಿಲ್ಲೆಯಲ್ಲಿ 4 ಮಂದಿಗೆ ಕೋವಿಡ್ ಸೋಂಕು ಇರುವುದು ಶನಿವಾರ ದೃಢಪಟ್ಟಿದೆ. ಕೋಡೋಂ ಬೇಳೂರು ನಿವಾಸಿಗಳಾದ 43, 32 ವರ್ಷ ಪ್ರಾಯದ ವ್ಯಕ್ತಿಗಳು, ಮಂಗಲ್ಪಾಡಿ ನಿವಾಸಿ 55 ವರ್ಷದ ವ್ಯಕ್ತಿ, ಪೈವಳಿಕೆ ನಿವಾಸಿ 35 ವರ್ಷದ ವ್ಯಕ್ತಿ ಗೆ ಸೋಂಕು ಖಚಿತಗೊಂಡಿದೆ. ಇವರಲ್ಲಿ 32 ವರ್ಷದ ಕೋಡೋಂ ಬೇಳೂರು ನಿವಾಸಿ ಕೊಲ್ಲಿರಾಷ್ಟ್ರದಿಂದ ಬಂದರಾಗಿದ್ದಾರೆ, 42 ವರ್ಷದ ಕೋಡೋಂ ಬೇಳೂರು ನಿವಾಸಿ ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾಗಿದ್ದಾರೆ. ಮಂಗಲ್ಪಾಡಿ ನಿವಾಸಿ ದುಬಾಯಿಯಿಂದ, ಪೈವಳಿಕೆ ನಿವಾಸಿ ಮಹಾರಾಷ್ಟ್ರ ದಿಂದ ಬಂದವರಾಗಿದ್ದಾರೆ.
ಇನ್ನು ಒಬ್ಬರು ರೋಗದಿಂದ ಗುಣಮುಖರಾಗಿದ್ದು ಜಿಲ್ಲೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 28 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಜಿಲ್ಲೆಯಲ್ಲಿ 2785 ಮಂದಿ ನಿಗಾದಲ್ಲಿದ್ದಾರೆ. ಮನೆಗಳಲ್ಲಿ 2278 ಮಂದಿ, ಆಸ್ಪತ್ರೆಗಳಲ್ಲಿ 507 ಮಂದಿ ನಿಗಾದಲ್ಲಿದ್ದಾರೆ. ಶನಿವಾರ ನೂತನವಾಗಿ 20 ಮಂದಿಯನ್ನು ಐಸೊಲೇಷನ್ ವಾರ್ಡಿಗೆ ದಾಖಲಿಸಲಾಗಿದೆ. 398 ಮಂದಿ ಶನಿವಾರ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ.
ಜಿಲ್ಲೆಯಲ್ಲಿ 6094 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 5434 ಮಂದಿಯ ಫಲಿತಾಂಶ ನೆಗೆಟಿವ್ ಆಗಿದೆ. 263 ಮಂದಿಯ ಫಲಿತಾಂಶ ಲಭಿಸಬೇಕಿದೆ.