ವಿಟ್ಲ, ಮೇ 24 (Daijiworld News/MB) : ಮುಂಬೈನಿಂದ ಬಂದ ವ್ಯಕ್ತಿಯ ಸಂಪರ್ಕದಿಂದಾಗಿ ವಿಟ್ಲ ಪೊಲೀಸ್ ಠಾಣೆ ಪೇದೆಗೆ ಕೊರೊನಾ ದೃಢಪಟ್ಟಿದೆ.
ಮೇ 14 ರಂದು ಮಹಾರಾಷ್ಟ್ರದ ರಾಯಗಡದಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಆತ ಕ್ವಾರಂಟೈನ್ಗೆ ಒಳಗಾಗುವ ಮುನ್ನ ಪೊಲೀಸ್ ಠಾಣೆಗೆ ಹೋಗಿದ್ದ ಎಂದು ತಿಳಿದು ಬಂದಿದೆ.
ಪೊಲೀಸರ ಕೊರೊನಾ ಪರೀಕ್ಷೆ ನಡೆಸಿದ ವೇಳೆ ಒರ್ವ ಪೊಲೀಸ್ ಪೇದೆಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ.