ವಿಟ್ಲ, ಮೇ 24 (DaijiworldNews/SM): ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿರುವ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯನ್ನು 48 ಗಂಟೆಗಳ ಕಾಲ ಸೀಲ್ ಡೌನ್ ಗೊಳಿಸಿ ದ.ಕ. ಜಿಲ್ಲಾ ಎಸ್ಪಿ ಲಕ್ಷ್ಮೀ ಪ್ರಸಾದ್ ಆದೇಶ ನೀಡಿದ್ದಾರೆ.
ಮೇ 24ರ ರವಿವಾರದಂದು ಲಭ್ಯವಾದ ವರದಿಯಲ್ಲಿ ವಿಟ್ಲ ಠಾಣಾ ಸಿಬ್ಬಂದಿಯೋರ್ವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ತಕ್ಷಣ ಕ್ವಾರಂಟೈನ್ ನಲ್ಲಿದ್ದ ಅವರನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ದಾಖಲಿಸಿ ಚಿಕಿತ್ಸೆ ಆರಂಭಿಸಲಾಗಿದೆ.
ಈ ನಡುವೆ ವಿಟ್ಲ ಪಟ್ಟಣ ಪಂಚಾಯತ್ ವತಿಯಿಂದ ಪೊಲೀಸ್ ಠಾಣೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಹಾಗೂ ಮುಂದಿನ ೪೮ ಗಂಟೆಗಳ ಕಾಳ ಠಾಣೆಯನ್ನು ಸಂಪೂರ್ಣವಾಗಿ ಬಂದ್ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆದೇಶ ನೀಡಿದ್ದಾರೆ.