ಕಾಸರಗೋಡು, ಮೇ 24 (DaijiworldNews/SM): ಹಲಸಿನ ಹಣ್ಣು ತಲೆಯ ಮೇಲೆ ಬಿದ್ದ ಪರಿಣಾಮ ಬೆನ್ನುಮೂಳೆಗೆ ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಪರೀಕ್ಷಿಸಿದ ಸಂದರ್ಭ ಅಘಾತಕಾರಿ ವಿಚಾರ ಬೆಳಕಿಗೆ ಬಂದಿದ್ದು, ಅವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಕಾಸರಗೋಡು ಜಿಲ್ಲೆಯ ಆಟೋ ಚಾಲಕರೊಬ್ಬರ ತಲೆ ಮೇಲೆ ಹಲಸಿನಹಣ್ಣು ಬಿದ್ದಿದೆ. ಪರಿಣಾಮ ಅವರ ಬೆನ್ನುಮೂಳೆ ಮುರಿತಕ್ಕೆ ಒಳಗಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆ ಸಂದರ್ಭದಲ್ಲಿ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿಯಲ್ಲಿ ಕೊರೊನಾ ದೃಢಪಟ್ಟಿದೆ. ಇವರಿಗೆ ಯಾವ ರೀತಿ ಸೋಂಕು ತಗುಲಿದೆ ಎಂದು ತಿಳಿದುಬಂದಿಲ್ಲ. ಸೋಂಕಿನ ಮೂಲ ಪತ್ತೆಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.