ಉಡುಪಿ, ಮೇ 25 (Daijiworld News/MSP): ಉಡುಪಿಯಲ್ಲಿ ಪೊಲೀಸರಿಗೆ ಕೊರೊನಾ ಸೋಂಕು ತಗಲಿದ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳಲಾಗುತ್ತಿದೆ.
ಸೋಂಕಿತ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಠಾಣೆಗಳನ್ನು ಬಂದ್ ಮಾಡಿ ಪಕ್ಕದಲ್ಲಿ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ.
ಅಜೆಕಾರು ಠಾಣೆಯ ಕಾರ್ಯ ನಿರ್ವಹಣೆಯನ್ನು ಅಜೆಕಾರು ಅಂಗನವಾಡಿಯಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆಯನ್ನು ಪುರಸಭಾ ಭವನದಲ್ಲಿ ಬ್ರಹ್ಮಾವರ ಠಾಣೆಯನ್ನು ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು . ಸಾರ್ವಜನಿಕರು ಅಗತ್ಯವಿದ್ದರೆ ಇಲ್ಲಿಗೆ ಭೇಟಿ ನೀಡಬಹುದು.
ಆಯಾ ಉಪವಿಭಾಗದಲ್ಲಿರುವ ಲಭ್ಯವಿರುವ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ. ಸೋಂಕಿತ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆ. ಇವರ ಸಂಪರ್ಕ ಹೊಂದಿದವರ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಠಾಣೆಗಳನ್ನು ಸಾನಿಟೈಸ್ ಮಾಡಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ತಿಳಿಸಿದ್ದಾರೆ.