ಬೆಳ್ತಂಗಡಿ, ಮೇ 25 (Daijiworld News/MB) : ಕೊರೊನಾಗೆ ದಕ್ಚಿಣ ಕನ್ನಡದಲ್ಲಿ ಮತ್ತೊಂದು ಬಲಿಯಾಗಿದ್ದು ಬೆಳ್ತಂಗಡಿ ಮೂಲದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ವ್ಯಕ್ತಿಯನ್ನು ಹೃದಯ ಸಂಬಂಧಿ ಖಾಯಿಲೆಯಿಂದಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಸಾವನ್ನಪ್ಪಿದ್ದಾರೆ. ಮೃತಪಟ್ಟ ಬಳಿಕ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಿದೆ.