ಕಾಸರಗೋಡು, ಮೇ 25 (Daijiworld News/MB) : ಅಣೆಕಟ್ಟಿನ ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಪೆರ್ಲ ಸಮೀಪದ ಅಡ್ಕಸ್ಥಳದಲ್ಲಿ ನಡೆದಿದೆ.
ಮೃತಪಟ್ಟವರನ್ನು ಕಾಟುಕುಕ್ಕೆ ಮೊಗರುವಿನ ಸುರೇಶ್ (33) ಎಂದು ಗುರುತಿಸಲಾಗಿದೆ.
ಕೂಲಿ ಕಾರ್ಮಿಕರಾಗಿದ್ದ ಸುರೇಶ್, ಭಾನುವಾರ ಅಡ್ಕಸ್ಥಳ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ್ದು, ಮರಳದಿರುವುದರಿಂದ ಮನೆಯವರು ಶೋಧ ನಡೆಸಿದ್ದಾರೆ. ಬಳಿಕ ಬದಿಯಡ್ಕ ಠಾಣಾ ಪೊಲೀಸರಿಗೆ ದೂರು ನೀಡಲಾಗಿದ್ದು ಪೊಲೀಸರು, ಅಗ್ನಿಶಾಮಕ ದಳದ ಸಿಬಂದಿಗಳು ಶೋಧ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಲಾಯಿತು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗುತ್ತದೆ.