ಮಂಗಳೂರು, ಮೇ 25(Daijiworld News/MSP): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಆರೋಗ್ಯ ಇಲಾಖೆಯ ಬೆಳಗ್ಗಿನ ಬುಲೆಟಿನ್ ಪ್ರಕಾರ ಮೂವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 69 ಕ್ಕೆ ಏರಿಕೆಯಾಗಿದೆ.
55, 30, 25 ವರ್ಷದ ಮೂವರು ಪುರುಷರಿಗೆ ಸೋಂಕು ತಗುಲಿದ್ದು ಈ ಮೂವರು ಮಹಾರಾಷ್ಟ್ರದ ಮುಂಬಯಿ ಮತ್ತು ಪೂನಾದಿಂದ ಬಂದಿದ್ದರು. ಇವರನ್ನು ಬೆಳ್ತಂಗಡಿಯಲ್ಲಿ ಕ್ವಾರೆಂಟೈನ್ ಮಾಡಲಾಗಿತ್ತು. ಸದ್ಯ ಇವರಿಗೆ ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಲಾಗುತ್ತಿದೆ.ಇವರೆಲ್ಲರನ್ನೂ ನಿಗದಿತ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ.