ಮಂಗಳೂರು, ಮೇ 26 (Daijiworld News/MB) : ಕತಾರ್ನಿಂದ ಬೆಂಗಳೂರಿಗೆ ಬಂದ ವಿಮಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂವರಿಗೆ ಕೊರೊನಾ ಪಾಸಿಟಿವ್ ಆಗಿದ್ದು ಅವರು ಬೆಂಗಳೂರಿನಲ್ಲಿಯೇ ಇರುವ ಕಾರಣದಿಂದಾಗಿ ಅವರನ್ನು ಅಲ್ಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ದ.ಕ. ಜಿಲ್ಲೆಯವರಾದ ಮೂವರು ಕತಾರ್ನಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೆಂಗಳೂರಿಗೆ ಬಂದ ಬಳಿಕ ಅವರನ್ನು ಅಲ್ಲೇ ಕ್ವಾರಂಟೈನ್ಗೆ ಒಳಪಡಿಸಲಾಗಿದ್ದು ಕೊರೊನಾ ಪರೀಕ್ಷೆ ನಡೆಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ.
ಮೇ 25 ರ ಸಂಜೆ 5 ರಿಂದ ಮೇ 26 ರ ಮಧ್ಯಾಹ್ನ 12 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ.