ಕಡಬ ಸೆ19: ನೂಜಿಬಾಳ್ತಿಲದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಜಮೀನಿನಲ್ಲಿರುವ ಕಟ್ಟಡದಲ್ಲಿ ನೂತನವಾಗಿ ಗ್ರಾಮಸ್ಥರ ಪ್ರಬಲ ವಿರೋಧದ ನಡುವೆಯೂ ಆರಂಭವಾಗಿದ್ದ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂಬ ಗ್ರಾಮಸ್ಥರ ಅನಿರ್ದಿಷ್ಟಾವಧಿ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಗ್ರಾಮಸ್ಥರ ವಿರೋಧದ ನಡುವೆಯೂ ಸೆಪ್ಟೆಂಬರ್ 11 ರಂದು ಪ್ರಾರಂಭಗೊಂಡ ಮದ್ಯದಂಗಡಿಯ ತೆರವುಗೆ ಆಗ್ರಹಿಸಿ ಭಾನುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳೀಯರು ಆರಂಭಿಸಿದ್ದರು.ಇಂದು ಕೂಡಾ ಈ ಪ್ರತಿಭಟನೆ ಮುಂದುವರಿದಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರವರು ಜಮಾಯಿಸಿ ಈ ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ.