ಮಂಗಳೂರು, ಮೇ 26 (Daijiworld News/MB) : ದ.ಕ. ಜಿಲ್ಲೆಯಲ್ಲಿ ಮೇ 26 ರ ಮಂಗಳವಾರದಂದು 417 ಮಂದಿಯ ಕೊರೊನಾ ಪರೀಕ್ಷಾ ವರದಿ ಲಭ್ಯವಾಗಿದ್ದು ಎಲ್ಲಾ ವರದಿಗಳು ನೆಗಡೆಟಿವ್ ಆಗಿದೆ. ಈ ಮೂಲಕ ಜಿಲ್ಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಕೊರೊನಾ ರಿಲೀಫ್ ದೊರೆತಂತಾಗಿದೆ.
ಮಂಗಳವಾರದಂದು ಮಧ್ಯಾಹ್ನ ಕರ್ನಾಟಕ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ್ದ ವರದಿಯಲ್ಲಿ ಕತಾರ್ನಿಂದ ಮರಳಿ ಬಂದು ಬೆಂಗಳೂರಿನಲ್ಲಿ ಕ್ವಾರಂಟೈನ್ನಲ್ಲಿದ್ದ ದ.ಕ ಜಿಲ್ಲೆಯ ಮೂವರಿಗೆ ಕೊರೊನಾ ಪಾಸಿಟಿವ್ ಆಗಿದೆ. ಆದರೆ ದ.ಕ. ಜಿಲ್ಲೆಯಲ್ಲಿ ಇಂದು ಲಭಿಸಿದ ಎಲ್ಲಾ ಕೊರೊನಾ ವರದಿಗಳು ನೆಗೆಟಿವ್ ಆಗಿದೆ.
ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 64 ಮಂದಿಯಲ್ಲಿ ಸೋಂಕು ಕಂಡುಬಂದಿದೆ. ಸದ್ಯ 37 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯ ತನಕ 7 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೊರ ಜಿಲ್ಲೆಯ ಆರು ಮಂದಿ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 26 ಮಂದಿ ಗುಣಮುಖರಾಗಿದ್ದಾರೆ. ಇಂದು 505 ಮಂದಿಯ ವರದಿ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಜಿಲ್ಲಾಡಳಿತರ ಅಧಿಕೃತ ವರದಿ ತಿಳಿಸಿದೆ.
ಮಂಗಳವಾರದಂದು 23 ಮಂದಿಯನ್ನು ಸ್ಕ್ರೀನಿಂಗ್ಗೆ ಒಳಪಡಿಸಲಾಗಿದೆ. 47 ಮಂದಿಯನ್ನು ಎನ್ಐಟಿಕೆಯಲ್ಲಿ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. 27 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿದ್ದಾರೆ.
ಒಟ್ಟು 6,073 ಮಂದಿ 28 ದಿನಗಳ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.