ಮಂಗಳೂರು: ಮೇ 28 (Daijiworld News/MSP):ಅಂತಾರಾಜ್ಯ ಪ್ರಯಾಣಕ್ಕೆ ಅನುಮತಿ ದೊರೆತ ಬಳಿಕ ಕೊರೊನಾ ಸೋಂಕು ಜಿಲ್ಲೆಯಲ್ಲಿ ತೀವ್ರಗತಿಯಲ್ಲಿ ಏರಿದೆ. ಇಂದು ಮತ್ತೆ 6 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿಗೆ ಒಳಗಾದ ಬಹುತೇಕ ಮಂದಿ ಮಹಾರಾಷ್ಟ್ರದ ಮುಂಬೈನಿಂದಲ್ಲೇ ಬಂದವರಾಗಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಗುರುವಾರ ಒಂದೇ ದಿನ 6 ಮಂದಿಯಲ್ಲಿ ಕೊರೊನಾ ದೃಢಪಟ್ಟಿದ್ದು , 61, 18 ವರ್ಷದ ಮಹಿಳೆ, 62 , 50 , 24, 36 ವರ್ಷದ ಪುರುಷರಲ್ಲಿ ಕೊರೊನಾ ಪತ್ತೆಯಾಗಿದೆ. ಇವರೆಲ್ಲರೂ ಮಹಾರಾಷ್ಟ್ರದ ರಾಜ್ಯದಿಂದ ಹಿಂತಿರುಗಿದವರಾಗಿದ್ದಾರೆ.