ಬಂಟ್ವಾಳ, ಮೇ 28 (DaijiworldNews/PY) : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ ಆರೋಪಿಗಳ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ದಿನೇಶ ಕನ್ಯಾನ ಎನ್ನಲಾಗಿದೆ.
ಎಪ್ರಿಲ್ 21ರಂದು ಸುಮಾರು 11.00 ಗಂಟೆಗೆ 16 ವರ್ಷದ ಬಾಲಕ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕೊಲ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ. ಈ ಸಂದರ್ಭ ಆರೋಪಿ ದಿನೇಶ ಕನ್ಯಾನ ಹಾಗೂ 16-17 ವರ್ಷ ಮೂವರು ಬಾಲಕರು ಆ ಬಾಲಕನನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ, ಹಲ್ಲೆ ನಡೆಸಿದ್ದಾರೆ. ಅಲ್ಲದೇ, ಬಾಲಕನ ಜೇಬಿನಲ್ಲಿದ್ದ ಹಣವನ್ನು ಕಸಿದುಕೊಂಡಿದ್ದಾರೆ.
ಈ ಬಗ್ಗೆಅಪರಾಧಿಗಳ ಭಯದಿಂದ ಬಾಲಕನು ತಡವಾಗಿ ದೂರು ನೀಡಿದ್ದಾನೆ. ಘಟನೆಯ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಆರೋಪಿಗಳ ಪತ್ತೆಗಾಗಿ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರ ನೇತೃತ್ವದ ತಂಡವನ್ನು ರಚಿಸಲಾಗಿದೆ.