ಮಂಗಳೂರು, ಮೇ 28 (DaijiworldNews/PY) : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜೂ. 1ರಿಂದ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್.ಸಾಯಿರಾಮ್ ತಿಳಿಸಿದ್ದಾರೆ.
ಸರಕಾರ ನೀಡಿರುವ ಕೆಲವು ಮಾರ್ಗಸೂಚಿಯಂತೆ ದೇವರ ದರ್ಶನಕ್ಕೆ ಬರುವ ಭಕ್ತರು ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಅಗತ್ಯವಿದ್ದು ಸಾರ್ವಜನಿಕರು ಆಡಳಿತದೊಂದಿಗೆ ಸಹಕರಿಸುವಂತೆ ಅಧ್ಯಕ್ಷರು ಮನವಿ ಮಾಡಿದ್ದಾರೆ.
ಜೂ. 1ರಂದು ಕ್ಷೇತ್ರದಲ್ಲಿ ಲೋಕಕಲ್ಯಾಣಾರ್ಥವಾಗಿ ವಿಶೇಷ ಹವನ, ಅಭಿಷೇಕ ಹಾಗೂ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಳೆದ ಮಾರ್ಚ್ ತಿಂಗಳಿನಿಂದ ಕೊರೊನಾ ಹಿನ್ನೆಲೆ ಭಕ್ತಾಧಿಗಳಿಗೆ ದೇವರ ದರ್ಶನ ಮಾಡಲು ನಿರ್ಬಂಧಿಸಿದ್ದು, ಇದೀಗ ಸರ್ಕಾರ ಆದೇಶವನ್ನು ಹಿಂತೆಗೆದುಕೊಂಡು ದೇವಸ್ಥಾನ ತೆರೆಯಲು ಅನುಮತಿ ನೀಡಿದೆ.