ಮೈಸೂರು, ಮಾ 24: ಏಳು ವರ್ಷದ ಬಳಿಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೈಸೂರಿಗೆ ಆಗಮಿಸಿದ್ದು, ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಒಳಿತಿಗಾಗಿ ರಾಹುಲ್ ಗಾಂಧಿ ಮೈಸೂರಿಗೆ ಆಗಮಿಸಿದ್ದು, ಜಗನ್ಮಾತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದಿದ್ದಾರೆ. ಕಳೆದ 2010 ರ ಅಗಸ್ಟ್ನಲ್ಲಿ ರಾಹುಲ್ ಮೈಸೂರಿಗೆ ಭೇಟಿ ನೀಡಿದ್ದರು. ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ಪೊಲೀಸರು ನಿರ್ಬಂಧಿಸಿದ್ದಾರೆ.
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಜೊತೆ ರಾಹುಲ್ ಗಾಂಧಿ ಸಂವಾದ ನಡೆಸಿದ ರಾಹುಲ್, ಬಿಜೆಪಿಯವರ ಒಂದೇ ರಾಷ್ಟ್ರ, ಒಂದೇ ಐಡಿಯಾ ಕಲ್ಪನೆಯನ್ನು ಒಪ್ಪುವುದಿಲ್ಲ. ಒಂದು ರಾಷ್ಟ್ರ ಹಲವು ಐಡಿಯಾವನ್ನು ಕಾಂಗ್ರೆಸ್ ಒಪ್ಪುತ್ತದೆ. ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಸಿಂಗಾಪುರದಲ್ಲಿ ಇರುವಂತೆ ಶೇ.7ರಷ್ಟು ಏಕ ಪ್ರಕಾರದ ಜಿಎಸ್ಟಿ ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ.