ಕೂಳೂರು, ಮಾ. 25: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ನಂತರ ರಸ್ತೆಯಲ್ಲಿ ಹೋಗುತ್ತಿದ್ದ ಬಸ್ಸಿಗೆ ಗುದ್ದಿದ ಘಟನೆ ರವಿವಾರ ಬೆಳಗ್ಗೆ ಕೂಳೂರು ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಚಾಲಕ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುರತ್ಕಲ್ ಸಂಚಾರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ, ಮಾಹಿತಿ ಪಡೆದುಕೊಂಡಿದ್ದಾರೆ.