ಮಂಗಳೂರು, ಮೇ 30 (Daijiworld News/MSP): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 13 ಪ್ರಕರಣಗಳು ವರದಿಯಾಗಿವೆ.
ಪಿಲಾರುವಿನಲ್ಲಿ ಸೋಂಕು ದೃಢವಾದ ಬಾಲಕನನ್ನು ಚಿಕಿತ್ಸೆಗೆ ಕರೆದೊಯ್ಯುತ್ತಿರುವುದು
ಇವುಗಳ ಪೈಕಿ ದಕ್ಷಿಣ ಕನ್ನಡದಲ್ಲಿ 13 ಮಂದಿ ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್ನಲ್ಲಿದ್ದವರಾಗಿದ್ದರೆ, ಒಂದು ಪ್ರಕರಣ ಸೋಮೇಶ್ವರ ಗ್ರಾಮದ ಪಿಲಾರ್ ದಾರಂದ ಬಾಗಿಲುವಿನಲ್ಲಿ ವರದಿಯಾಗಿದೆ. 17 ವರ್ಷದ ಬಾಲಕನಿಗೆ ಪಾಸಿಟಿವ್ ಬಂದಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ದ,ಕ ಒಟ್ಟು 75 ಸಕ್ರಿಯ ಪ್ರಕರಣಗಳಿವೆ
ಇನ್ನು ಉಡುಪಿಯಲ್ಲಿ ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್ನಲ್ಲಿದ್ದ 13 ಮಂದಿಯಲ್ಲಿ ಕೊರೊನಾ ದೃಢವಾಗಿದೆ. ಶನಿವಾರ ಉಡುಪಿ ಜಿಲ್ಲೆಯಲ್ಲಿ 17 ಮಕ್ಕಳು ಸೇರಿದಂತೆ 45 ಮಂದಿ ಗುಣಮುಖರಾಗಿದ್ದು ಆಸ್ಪತ್ರೆಯಿಂದ