ಮಂಗಳೂರು, ಮೇ 30 (Daijiworld News/MSP): ಹವಾಮಾನ ಮುನ್ಸೂಚನೆಯಂತೆ ಮೇ 31 ರಿಂದ ಜೂನ್ 04 ರವರೆಗೆ ಅರಬ್ಬಿ ಸಮುದ್ರದ ಆಗ್ನೇಯ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಯುಭಾರ ಕುಸಿತವಾಗುವ ಸಂಭವವಿರುವ ಕಾರಣ ಜೂ 4 ರವರೆಗೆ ಮೀನುಗಾರಿಕೆ ನಡೆಸದಂತೆ ಸೂಚನೆ ಮೀನುಗಾರಿಕಾ ಇಲಾಖೆ ನಿರ್ದೇಶನ ನೀಡಿದೆ.
ಸಮುದ್ರವು ಪ್ರಕ್ಷುಬ್ಧವಾಗುವುದರಿಂದ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮಂಗಳೂರು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.